ಶ್ರೀಗಣೇಶ ಮೂರ್ತಿಯ ಅಲಂಕಾರ ಹೀಗಿರಲಿ!
ಇತ್ತೀಚೆಗೆ ಗಣೇಶೋತ್ಸವಕ್ಕಾಗಿ ಮಾಡಲಾಗುವ ಅಲಂಕಾರಕ್ಕಾಗಿ ವಿವಿಧ ರೀತಿಯ ಬಣ್ಣಗಳಿಂದ ಹಾಗೂ ಮಿನುಗುವ ಕಾಗದ, ಥರ್ಮಾಕೋಲ್, ಪ್ಲಾಸ್ಟಿಕ್ ಮುಂತಾದವುಗಳನ್ನು ಉಪಯೋಗಿಸಲಾಗುತ್ತದೆ. ಅಲ್ಲದೇ ಬಣ್ಣಬಣ್ಣದ ವಿದ್ಯುತ್ ದೀಪಗಳ ಮಾಲೆಯನ್ನೂ ಬಳಸಲಾಗುತ್ತದೆ. ಈ ವಸ್ತುಗಳು ಕೃತಕ ಹಾಗೂ ರಾಸಾಯನಿಕ ವಸ್ತುಗಳಿಂದ ತಯಾರಿಸಲಾಗುತ್ತದೆ. ಹಾಗಾಗಿ ಈ ವಸ್ತುಗಳಲ್ಲಿ ರಜತಮದ ಪ್ರಮಾಣವು ಹೆಚ್ಚಿರುತ್ತದೆ. ಅಲ್ಲದೇ ಅಂತಹವುಗಳು ವಾತಾವರಣದಲ್ಲಿನ ರಜತಮವನ್ನು ಆಕರ್ಷಿಸಿ ಅಲ್ಲಿನ ಪರಿಸರವನ್ನು ರಜ-ತಮಯುಕ್ತಗೊಳಿಸುತ್ತದೆ. ಆಧ್ಯಾತ್ಮಿಕ ದೃಷ್ಟಿಯಿಂದ ಪ್ರತಿಯೊಂದು ದೇವತೆಯ ಒಂದು ವಿಶಿಷ್ಟ ತತ್ವವಿರುತ್ತದೆ. ಹಾಗಾಗಿ ಗಣೇಶ ಚತುರ್ಥಿಯಂದು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಬರುವ ಗಣೇಶತತ್ವವನ್ನು ಆಕರ್ಷಿಸುವ ಸಾತ್ವಿಕ ವಸ್ತುಗಳನ್ನು ಬಳಸಬೇಕು. ಅದಕ್ಕೆ ಕೆಳಗಿನ ವಸ್ತುಗಳನ್ನು ಬಳಸಿರಿ.

  • ನೈಸರ್ಗಿಕ ಹೂವು-ಎಲೆಗಳಿಂದ ತಯಾರಿಸಿದ ತೋರಣಗಳು

  • ಕೆಂಪು ಬಣ್ಣದ ಹೂವು ಹಾಗೂ ದೂರ್ವೆ, ಶಮಿಯ ಎಲೆಗಳು

  • ಶ್ರೀಗಣೇಶನತತ್ವವನ್ನು ಆಕರ್ಷಿಸುವ ರಂಗೋಲಿ

  • ಶ್ರೀಗಣೇಶನಸಾತ್ವಿಕ ನಾಮಜಪದ ಪಟ್ಟಿಗಳು ಇತ್ಯಾದಿ.