Menu Close

ಹಾಸನದ 30 ಕ್ಕೂ ಅಧಿಕ ದೇವಸ್ಥಾನಗಳು ಸೇರಿ ರಾಜ್ಯದ 500 ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿ ! – ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ

ಹಾಸನ : ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜೈನ್ ನ ಶ್ರೀ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತ್ವಿಕ ವಸ್ತ್ರ ಸಂಹಿತೆ ಜಾರಿಯಿದೆ. ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್ ಸಹ ರಾಜ್ಯದ 211 ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿತ್ತು. ಈಗಾಗಲೇ ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ದ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ಜಾರಿ ಮಾಡಿದೆ. ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ, ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ರಾಜ್ಯದ 500 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮತ್ತು ಹಾಸನದ 30 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಶ್ರೀ. ಚಂದ್ರ ಮೊಗವೀರ ಹೇಳಿದರು. ಅವರು ಹಾಸನದ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಪ್ರತೀ ದೇವಸ್ಥಾನಗಳ ಮುಂಭಾಗದಲ್ಲಿ ವಸ್ತ್ರ ಸಂಹೀತೆಯ ಫಲಕಗಳನ್ನು ಹಾಕಿ ಜನಪ್ರಭೋಧನೆ ಮಾಡುವುದು, ದೇವಸ್ಥಾನದ ಪಾವಿತ್ರ್ಯತೆಯ ರಕ್ಷಣೆ ಮತ್ತು ಭಾರತೀಯ ಸಂಸ್ಕೃತಿಯ ಪಾಲನೆಯಾಗುವ ಉದ್ದೇಶದಿಂದ ದೇವಸ್ಥಾನಕ್ಕೆ ಬರುವ ಭಕ್ತರು ತುಂಡು ಬಟ್ಟೆ ಧರಿಸುವ ಬದಲು, ಭಾರತೀಯ ಸಂಸ್ಕೃತಿಯ ಪಾಲನೆ ಮಾಡಿ ದೇವಸ್ಥಾನ ವ್ಯವಸ್ಥಾಪನೆಗೆ ಸಹಕರಿಸಲು ಜನಜಾಗೃತಿ ಮೂಡಿಸಲಾಗುವುದು.
ಭಾರತೀಯ ಸಾತ್ವಿಕ ಉಡುಪುಗಳು : ಮಹಿಳೆಯರು ಚುಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ, ಓಡಾಣಿ ಮುಂತಾದ ಪಾರಂಪರಿಕ ಸಾತ್ವಿಕ ವೇಷಭೂಷಣಗಳನ್ನು ಧರಿಸಬೇಕು ಮತ್ತು ಪುರುಷರು ಕುರ್ತಾ, ಧೋತಿ, ಲುಂಗಿ ಅಥವಾ ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್‌ಗಳನ್ನು ಹಾಕಬೇಕು.
ಆಧುನಿಕ ಅಸಾತ್ವಿಕ ಉಡುಪುಗಳು : ಪಾಶ್ಚಿಮಾತ್ಯ ಉಡುಪುಗಳಲ್ಲಿ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಕರ್ಟ್, ಸ್ಲೀವ್‌ಲೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಇತ್ಯಾದಿ ಉಡುಪುಗಳನ್ನು ಹಾಕಬಾರದೆಂದು ವಿನಂತಿಸುತ್ತೇವೆ.

ದೇವಸ್ಥಾನಗಳನ್ನು ಧರ್ಮಪ್ರಚಾರ ಕೇಂದ್ರವನ್ನಾಗಿ ಮಾಡುವುದು :
ದೇವಸ್ಥಾನಗಳ ಸಂರಕ್ಷಣೆ, ಸಂಘಟನೆಯ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಸ್ಥರದ ಅಧಿವೇಶನಗಳನ್ನು ಮಾಡಿ, ದೇವಸ್ಥಾನಗಳ ಸಂಘಟನೆ ಮಾಡಲಾಗುವುದು. ಅದಲ್ಲದೇ ಹಿಂದೂ ಸಮಾಜಕ್ಕೆ ಹಿಂದೂ ಧರ್ಮದ ಬಗ್ಗೆ ಶಿಕ್ಷಣ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ 50 ದೇವಸ್ಥಾನಗಲ್ಲಿ ಮಕ್ಕಳು, ಸ್ತ್ರೀ-ಪುರುಷರಿಗೆ ನಿಯಮಿತಿವಾಗಿ ಹಿಂದೂ ಧರ್ಮದ ಶಿಕ್ಷಣ ನೀಡುವ ವರ್ಗಗಳ್ನು ಸಹ ಪ್ರಾರಂಭ ಮಾಡಲಾಗುವುದು. ಇದಕ್ಕೆ ಸಂಬಂದಿಸಿ ಒಂದು ಪಠ್ಯಕೃಮವನ್ನು ಸಹ ರಚಿಸಲಾಗಿದೆ. ಈಗಾಗಲೇ ರಾಜ್ಯದ 3೦೦ ಸ್ಥಳಗಳಲ್ಲಿ ಈ ವರ್ಗ ಪ್ರಾರಂಭಿಸಲಾಗಿದೆ. ಮುಂದೆ ಪ್ರತಿ ದೇವಸ್ಥಾನಗಳಲ್ಲಿ ಹಿಂದೂ ಧರ್ಮ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು.

ಇದಲ್ಲದೇ ಕರ್ನಾಟಕದಲ್ಲಿ ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರನ್ನು ಈಗಾಗಲೇ ಭೇಟಿ ಮಾಡಿ ಸರಕಾರಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ, ಧರ್ಮ ಶಿಕ್ಷಣ ಫಲಕಗಳನ್ನು ಅಳವಡಿಸಲು ಮನವಿ ನೀಡಲಾಗಿದೆ. ಮಾನ್ಯ ಸಚಿವರು ಈ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ನಲ್ಲಿ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಚಂದ್ರ ಮೊಗವೀರ ಹೇಳಿದರು. ಈ ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದ ಟ್ರಸ್ಟಿಗಳಾದ ಶ್ರೀ. ನಾಗೇಶ್, ಉತ್ತರ ಉತ್ತಿಷ್ಠ ಗಣಪತಿ ದೇವಸ್ಥಾನದ ಟ್ರಸ್ಟಿಗಳಾದ ಶ್ರೀ. ರಾಘವೇಂದ್ರ ಆಚಾರ್, ಶ್ರೀ ಶನೇಶ್ವರ ದೇವಸ್ಥಾನ ಹುಣಸಿನಕೆರೆ ಬಡಾವಣೆ ಅಧ್ಯಕ್ಷರಾದ ಶ್ರೀ. ವೆಂಕಟೇಶ್ ಇವರು ಸೇರಿದಂತೆ ಸುಮಾರು ದೇವಸ್ಥಾನದ ಟ್ರಸ್ಟಿಗಳು ಉಪಸ್ಥಿತಿ ಇದ್ದರು.

Related News