
ವ್ಯಾಲೆಂಟೈನ್ಸ್ ಡೇ ಕುರಿತ್ತು ಮನವಿಯನ್ನು ಕುಣಿಗಲ್ ತಹಶೀಲ್ದಾರ್ ಗ್ರೇಡ್ 2 ಶ್ರೀ ಟಿ.ಜಿ.ಯೋಗೇಶ್ ರವರಿಗೆ ಕೊಡಲಾಯಿತು. ಉಪಸ್ಥಿತರು ಶ್ರೀ ಸುಹಾಸ್, ಶ್ರೀ ಕೆ.ಎನ್.ಮಂಜುನಾಥ್ ಮತ್ತು ಮಂಜುನಾಥ್ ರಾಮಯ್ಯ.
ತುಮಕೂರು ಜಿಲ್ಲೆ : 14 ಫೆಬ್ರವರಿಯಂದು ‘ವೆಲಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ, ಇದರ ಪರಿಣಾಮವಾಗಿ ಯುವಪೀಳಿಗೆ ಭೋಗವಾದ ಮತ್ತು ಅನೈತಿಕತೆಯತ್ತ ಸಾಗುತ್ತಿದೆ. ‘ವೆಲಂಟೈನ್ ಡೇ’ ಹಿನ್ನೆಲೆಯಲ್ಲಿ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಹೆಚ್ಚಾಗುತ್ತಿವೆ ಆದ್ದರಿಂದ ಇದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಕುಣಿಗಲ್ ನ ತಹಶೀಲ್ಧಾರ್ ಇವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಕೆ.ಏನ್.ಮಂಜುನಾಥ್, ಸುಹಾಸ್ ಯಸ್ ಮತ್ತು ಮಂಜುನಾಥ್ ರಾಮಯ್ಯ ಇವರು ಉಪಸ್ಥಿತರಿದ್ದರು.
ವ್ಯಾಲೆಂಟೈನ್ ಡೇ ವೇಳೆ ‘ಪಾರ್ಟಿಗಳಲ್ಲಿ’ ಯುವಕ-ಯುವತಿಯರು ಮದ್ಯಪಾನ, ಧೂಮಪಾನ, ಮಾದಕ ವಸ್ತುಗಳ ಸೇವನೆ ಮುಂತಾದ ಅನಾಚಾರಗಳಲ್ಲಿ ತೊಡಗುವುದು ಬೆಳಕಿಗೆ ಬಂದಿದೆ. ಇದಲ್ಲದೇ, ಈ ದಿನ ಗರ್ಭನಿರೋಧಕ ಸಾಮಗ್ರಿಗಳ ಹೆಚ್ಚಿನ ಮಾರಾಟವು ಅನೈತಿಕ ಸಂಬಂಧಗಳ ಹೆಚ್ಚಳವನ್ನು ತೋರಿಸುತ್ತದೆ. ಯುವತಿಯರನ್ನು ಪ್ರಭಾವಿತ ಮಾಡಲು ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಅಲ್ಲದೆ, ಸುಳ್ಳು ಹೆಸರು ಹೇಳಿ ಯುವತಿಯರಿಗೆ ಮೋಸ ಮಾಡುವವರು ‘ಲವ್ ಜಿಹಾದ್’ ಮೂಲಕ ಅವರ ಬದುಕನ್ನು ಹಾಳು ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಫೆಬ್ರವರಿ 14 ರಂದು ನಗರದಲ್ಲಿ ವಿಶೇಷ ಪೊಲೀಸ್ ಪಥಕ ನಿಯೋಜಿಸಬೇಕು. ಕಾಲೇಜು ಆವರಣಗಳಲ್ಲಿ ಕಾನೂನು ವಿರೋಧಿ ಕೃತ್ಯಗಳಲ್ಲಿ ತೊಡಗುವವರ ಮೇಲೆ ನಿಗಾ ಇಡಬೇಕು, ಅತಿವೇಗದಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಷ್ಟೇ ಅಲ್ಲದೆ ಆಪತ್ತಿನ ಸಂದರ್ಭಗಳಲ್ಲಿ ಯುವತಿಯರಿಗೆ ಸಹಾಯ ಮಾಡಲು ‘ವಿಶೇಷ ಹೆಲ್ಪ್‌ಲೈನ್ ನಂಬರ್’ ಅನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಮನವಿಯ ಮೂಲಕ ಬೇಡಿಕೆ ಇಡಲಾಗಿದೆ.


