ಹಿಂದೂ ಸಂಘಟನೆಗಳ ಸಂಘಟಿತ ಪ್ರಯತ್ನಕ್ಕೆ ಸಂದ ಜಯ !

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಶಿವಮೊಗ್ಗದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡುತ್ತಿರುವುದು
ದಕ್ಷಿಣ ಕನ್ನಡ ಜಿಲ್ಲೆಯ ಬಜರಂಗದಳದ ಗೋರಕ್ಷಾ ಪ್ರಮುಖರಾದ ಸುಹಾಸ್ ಶೆಟ್ಟಿಯವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳವು ವಹಿಸಿಕೊಂಡಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ಇದನ್ನು ಸಮಸ್ತ ಹಿಂದೂಪರ ಸಂಘಟನೆಗಳ ಒಕ್ಕೂಟವಾದ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಸ್ವಾಗತ ಮಾಡುತ್ತದೆ. ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಈ ಪ್ರಕರಣದಲ್ಲಿ ರಾಜ್ಯವ್ಯಾಪಿ ಆಂದೋಲನ ಮಾಡಿ, ಈ ಹತ್ಯೆಯ ಹಿಂದೆ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯರ ಕೈವಾಡವಿರುವ ಶಂಕೆಯಿದೆ, ಹಾಗಾಗಿ ಇದನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು. ಎಂಬ ಬೇಡಿಕೆಯನ್ನು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಅಡಿಯಲ್ಲಿ ಎಲ್ಲ ಸಂಘಟನೆಗಳ ಜೊತೆಗೆ ಸೇರಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಕಾರವಾರ ಮತ್ತು ವಿಜಯಪುರ ಮುಂತಾದ ಜಿಲ್ಲಾ ಕೇಂದ್ರಗಳಲ್ಲಿ ಆಂದೋಲನ ಮಾಡಿ, ಮನವಿಯನ್ನು ರಾಜ್ಯಪಾಲರಿಗೆ ಸಲ್ಲಿಸಿತ್ತು. ಈಗ ರಾಷ್ಟ್ರೀಯ ತನಿಖಾ ದಳವು ಈ ಪ್ರಕರಣವನ್ನು ಕೈಗೆ ತೆಗೆದುಕೊಂಡಿರುವುದು ಅತ್ಯಂತ ಶ್ಲಾಘನೀಯ. ಇದು ಸಮಸ್ತ ಹಿಂದೂಪರ ಸಂಘಟನೆಗಳ ಸಂಘಟಿತ ಹೊರಾಟಕ್ಕೆ ಸಿಕ್ಕ ಮೊದಲ ವಿಜಯವಾಗಿದೆ. ರಾಷ್ಟ್ರೀಯ ತನಿಖಾ ದಳವು ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ಮಾಡಿ, ಇದರ ಹಿಂದೆ ಇರುವ ಅಪರಾಧಿಗಳನ್ನು ಬಂಧನ ಮಾಡಿ ಸುಹಾಸ್ ಶೆಟ್ಟಿ ಹಂತಕರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕೆಂದು ಆಗ್ರಹ ಮಾಡುತ್ತದೆ. ಅದರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ನಿಜವಾಗಿ ಕೋಮುಸೌಹಾರ್ದವು ಉಳಿಯುವುದು ಮತ್ತು ಹಿಂದೂ ನಾಯಕರ ರಕ್ಷಣೆಯಾಗುವುದು ಎಂಬ ಭರವಸೆ ಇದೆ.
ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ದಿಂದ ಮಂಗಳೂರಿನ ಪೊಲೀಸ್ ಮಹಾನಿರೀಕ್ಷಕರಿಗೆ ಮನವಿಯನ್ನು ಸಲ್ಲಿಸಲಾಯಿತು |
ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಹಾಸನದ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುತ್ತಿರುವುದು |
ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಪೋಲಿಸ್ ಪ್ರಾಧಿಕಾರ ಅದ್ಯಕ್ಷರಾದ ನ್ಯಾಯಮೂರ್ತಿ ಕೆ.ಎನ್. ಸುಧೀಂದ್ರ ರಾವ್ ಇವರಿಗೆ ಮನವಿ |
ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಮಾನ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ. |


