
ಕಾರವಾರದ ಕಣಸಗಿರಿ ಗೋಶಾಲೆಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ
ಸಮಸ್ತ ಹಿಂದೂ ಸಂಘಟನೆಗಳಿಂದ ಜಿಲ್ಲಾಡಳಿತಕೆ ಮನವಿ
ಕಾರವಾರ : ಹಿಂದೂರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಸರ್ಕಾರಿ ಗೋಶಾಲೆಯ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿಗಳ ಅವ್ಯವಹಾರಗಳನ್ನು ಮಾಡಿದ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮವನ್ನು ಯಾಕೆ ತೆಗೆದುಕೊಳ್ಳುತ್ತಿಲ್ಲ ? ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಇದ್ದಾರೆ. 3 ತಿಂಗಳಾದರೂ ಕ್ರಮ ಜರುಗಿಸುತ್ತಿಲ್ಲ ಅಂದರೆ ಇದರ ಹಿಂದೆ ಯಾರ ಸಹಾಯ ಇದೆ ಎಂಬ ಸಂಶಯ ನಿರ್ಮಾಣ ಆಗುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕರಾದ ಶ್ರೀ. ಗುರುಪ್ರಸಾದ ಗೌಡ ಇವರು ಹೇಳಿದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕಣ್ಣೀರಿ ಮಠದ ಶ್ರೀ ಕಾಡಸಿದ್ಧೇಶ್ವರಿ ಸ್ವಾಮಿಗಳಿಗೆ ವಿಜಾಪುರ ಮತ್ತು ಬಾಗಲಕೋಟ ಜಿಲ್ಲೆಗಳಿಗೆ ವಿಧಿಸಿದ ನಿರ್ಬಂಧದ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ, ರಾಷ್ಟೀಯ ಸ್ವಯಂಸೇವಕ ಸಂಘದ ಪಥಸಂಚಾಲನೆಯಲ್ಲಿ ಭಾಗವಹಿಸಿದ್ದ ನೌಕರರನ್ನು ವಜಾಗೊಳಿಸಿದ ಸರಕಾರದ ನೀತಿಯನ್ನು ಖಂಡಿಸಿದರು .

ಈ ಪ್ರತಿಭಟನೆಯಲ್ಲಿ ಸನಾತನ ರಾಷ್ಟ್ರೀಯ ಸೇವಾ ಸಂಘದ ಅಧ್ಯಕ್ಷರಾದ ಶ್ರೀ.ಶರತ್ , ಕಾರವಾರದ ಗೋರಕ್ಷಕರು ಮತ್ತು ಬಜರಂಗದಳದ ಪ್ರಮುಖರಾದ ಶ್ರೀ. ಅಮಿತ್ ಮಾಳಶೇಖರ್, ಗೋರಕ್ಷಕರು ಮತ್ತು ಅಧ್ಯಕ್ಷರಾದ ಶ್ರೀ. ಸೂರ್ಯಕಾಂತ್ ಮುಂತಾದ ಹಿಂದೂ ಪರ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು


